ವಿದ್ಯುತ್ ಹಾಗೂ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ವಿದ್ಯುತ್ ಹಾಗೂ ನೀರಾವರಿ ಇಲಾಖೆಯಲ್ಲಿ ಖಾಲಿ ಇರುವ 82 ಫೀಲ್ಡ್ ಇಂಜಿನಿಯರ್ ಮತ್ತು ಫೀಲ್ಡ್ ಸೂಪರ್ ವೈಸರ್ ಹುದ್ದೆಗಳನ್ನು ಪೂರ್ಣ ಸಮಯದವರೆಗೆ ಗುತ್ತಿಗೆ ಆಧಾರದಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16 ಡಿಸೇಂಬರ್ 2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 82
* ಫೀಲ್ಡ್ ಇಂಜಿನಿಯರ್ : 18
* ಫೀಲ್ಡ್ ಸೂಪರ್ ವೈಸರ್ : 64
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು 45 ವರ್ಷ ವಯೋಮಿತಿಯನ್ನು ಮೀರಿರಬಾರದು. ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 20,000/- ರಿಂದ 30,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments