ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಅಪ್ರೆಂಟಿಸ್ (ತರಬೇತಿ) ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಲ್ಲಿದ್ದಲು ಸಚಿವಾಲಯದ ಆಡಳಿತ ನಿಯಂತ್ರಣದಲ್ಲಿರುವ ಕೋಲ್ ಇಂಡಿಯಾ ಲಿಮಿಟೆಡ್‌ನ ಎಂಟು ಅಂಗಸಂಸ್ಥೆ ಕಂಪನಿಗಳಲ್ಲಿ ಒಂದಾದ ವೆಸ್ಟರ್ನ್ ಕೋಲ್ಫೀಲ್ಡ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ 1,191 ಅಪ್ರೆಂಟಿಸ್ (ತರಬೇತಿ) ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 16/09/2023 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ : 1,191
* ಟ್ರೇಡ್ ಅಪ್ರೆಂಟಿಸ್ - 815
* ಟೆಕ್ನೀಶಿಯನ್ ಅಪ್ರೆಂಟಿಸ್ - 215
* ಗ್ರಾಜ್ಯುಯೇಟ್ ಅಪ್ರೆಂಟಿಸ್ - 101
* ಸೆಕ್ಯೂರಿಟಿ ಗಾರ್ಡ್ - 60
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ SSLC, ಬಿ.ಇ/ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು
* ವಿದ್ಯಾರ್ಹತೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೊರೈಸಿರಬೇಕು ಹಾಗೂ ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments