ಭಾರತೀಯ ರೈಲ್ವೆ ಸಚಿವಾಲಯದ ಪಶ್ಚಿಮ ಮಧ್ಯ ರೈಲ್ವೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಸಚಿವಾಲಯದಡಿಯಲ್ಲಿ ಬರುವ ಪಶ್ಚಿಮ ಮಧ್ಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 424 ಅಸಿಸ್ಟಂಟ್ ಲೋಕೋ ಪೈಲಟ್, ಟೆಕ್ನಿಷಿಯನ್ ಗ್ರೇಡ್, ಟ್ರೈನ್ ಮ್ಯಾನೇಜರ್ ಮತ್ತು ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 02-09-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 424
ALP/Technicians Category Posts : 360
JE Category Posts : 38
Train Manager Category Posts : 26
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 42 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ 45 ವರ್ಷ
SC/ST ಅಭ್ಯರ್ಥಿಗಳಿಗೆ 47 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments