ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ35 ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಮತ್ತು ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18 ಆಗಸ್ಟ್ 2024 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಯಾದಗಿರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಚಿತ್ತಾಪುರ ಮುಖ್ಯ ರಸ್ತೆ, ಯಾದಗಿರಿ- 585202
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28 ಮತ್ತು 31 ಆಗಸ್ಟ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ ಮತ್ತು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಸಂದರ್ಶನ ನಡೆಯುವ ಸ್ಥಳ :
ನಿರ್ದೇಶಕರು, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ, BMCRI (ಹಳೆಯ ಕಟ್ಟಡ), ಕೋಟೆ, ಬೆಂಗಳೂರು
ಹುದ್ದೆಗಳ ವಿವರ :35
ಪ್ರಾಧ್ಯಾಪಕರು - 02
ಸಹ ಪ್ರಾಧ್ಯಾಪಕರು - 09
ಸಹಾಯಕ ಪ್ರಾಧ್ಯಾಪಕರು - 24
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MD/ MS/ DNB ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಅಭ್ಯರ್ಥಿಗಳು ಈ ಹುದ್ದೆಗಳಿಗೆ ಕೆಳಗೆ ನೀಡಿರುವ ವಯೋಮಿತಿಯನ್ನು ಮೀರಿರಬಾರದು
- ಪ್ರಾಧ್ಯಾಪಕರು - 48 ವರ್ಷ
- ಸಹ ಪ್ರಾಧ್ಯಾಪಕರು - 43 ವರ್ಷ
- ಸಹಾಯಕ ಪ್ರಾಧ್ಯಾಪಕರು - 38 ವರ್ಷ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನೀಡಲಾಗುತ್ತದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments